ಕುದ್ರೋಳಿ ಕ್ಷೇತ್ರದ ಉಪಾಧ್ಯಕ್ಷರಾಗಿ ಊರ್ಮಿಳಾ ರಮೇಶ್ ಆಯ್ಕೆ

Update: 2021-08-19 10:45 GMT

ಮಂಗಳೂರು, ಆ.18: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರಾಗಿ ಊರ್ಮಿಳಾ ರಮೇಶ್ ಅವರನ್ನು ಸರ್ವಾನುಮತದಿಂದ ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್. ಸಾಯಿರಾಮ್ ಅವರು ಈ ಆಯ್ಕೆ ಪ್ರಕ್ರಿಯೆ ನಡೆಸಿದರು. ಈ ಸಂದರ್ಭ ಕ್ಷೇತ್ರದ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಮೊಕ್ತೇಸರರಾದ ರವಿಶಂಕರ್ ಮಿಜಾರ್, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ ಉಪಸ್ಥತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News