ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

Update: 2021-08-20 13:43 GMT

ಮೈಸೂರು,ಆ.20: ಆ.23 ರಿಂದ ಶಾಲೆ ಪ್ರಾರಂಭ ಮಾಡಲಿದ್ದು, ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ ಶಿಕ್ಷಣ ಸಚಿವ ಸಿ.ಎನ್.ನಾಗೇಶ್ ತಿಳಿಸಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದು  ಕೆಲಸ ಸಮಯ ಶಿಕ್ಷಣ ಇಲಾಖೆಯ ವಿಚಾರಗಳ ಬಗ್ಗೆ ಚರ್ಚಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದೇ ತಿಂಗಳ ಆ.23 ರಿಂದ ಶಾಲೆಗಳನ್ನು ಆರಂಭಿಸಲಾಗುವುದು. ಶಾಲೆ ಪ್ರಾರಂಭವಾದರೆ ಪೋಷಕರುಗಳೇ ಸಹಕಾರ ನೀಡಲಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರುಗಳು ಒಂದು ಹೆಜ್ಜೆ ಮುಂದಿಟ್ಟು ಶಾಲೆ ಆರಂಭಕ್ಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಿದರು.

ಮೊದಲ ಹಂತದಲ್ಲಿ 8 ರಿಂದ 10ನೇ ತರಗತಿವರೆಗೆ ಶಾಲೆ ಅರಂಭಿಸಲಾಗುವುದು. ಇದರ ಸಾಧಕ ಭಾದಕಗಳನ್ನು ನೋಡಿಕೊಂಡು ಎರಡನೇ ಹಂತದಲ್ಲಿ ಶಾಲೆ ಆರಂಭಿಸಲಾಗುವುದು. ಈಗಾಗಲೇ 1ರಿಂದ 8ನೇ ತರಗತಿವರೆಗೂ ಶಾಲೆ ಆರಂಭಿಸಬಹುದು ಎಂದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು ಹೇಳಿದ್ದರು. ಆದರೆ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಶಾಲೆ ಆರಂಭಿಸುತ್ತಿಲ್ಲ ಎಂದು ಹೇಳಿದರು.

ಈಗಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಜೊತೆ ಕೈಜೋಡಿಸಿವೆ. ಕೆಲವು ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನಮ್ಮ ಅಧಿಕಾರಿಗಳು ಖಾಸಗಿ ಶಾಲೆಗಳವರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದು, ಶಾಲೆ ಆರಂಭಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News