ಬುಡೋಳಿಯಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರನಿಗೆ ಗಾಯ
Update: 2021-08-21 09:50 IST
ಬಂಟ್ವಾಳ, ಆ.21: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ.
ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.