ಹಂತಹಂತವಾಗಿ ಪೂರ್ಣ ಪ್ರಮಾಣದಲ್ಲಿ ಶಾಲೆ ಪ್ರಾರಂಭ: ಸಿಎಂ ಬೊಮ್ಮಾಯಿ
Update: 2021-08-21 11:32 IST
ಬೆಂಗಳೂರು, ಆ.21: ರಾಜ್ಯದಲ್ಲಿ ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಶಾಲೆಯನ್ನು ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಶಾಲೆ ಆರಂಭವಾಗಲಿದೆ. ಈಗಾಗಲೇ ಇದಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ಯಾನಿಟೈಸೇಶನ್ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲವು ಶಾಲೆಗಳಿಗೆ ನಾನು ಮತ್ತು ಶಿಕ್ಷಣ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದರು.