×
Ad

ಬೆಂಗಳೂರು: ಕಾಲಿಗೆ ಗುಂಡಿಕ್ಕಿ ರೌಡಿಶೀಟರ್ ನ ಬಂಧನ

Update: 2021-08-21 12:07 IST

ಬೆಂಗಳೂರು, ಆ.21: ಪೊಲೀಸರ ಮೇಲೆ ನಡೆಸಿ ಪರಾರಿಯಾಗಲೆತ್ನಿಸಿದ ರೌಡಿಶೀಟರ್ ಓರ್ವನನ್ನು ಕಾಲಿಗೆ ಗುಂಡಿಕ್ಕಿ ಸಂಜಯ್​ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಅವಿನಾಶ್(22) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಅವಿನಾಶ್ ಹಲವು ಪ್ರಕರಗಳ ಆರೋಪಿಯಾಗಿದ್ದು, ಇತ್ತೀಚಿಗಷ್ಟೇ ಮುನಿರಾಜು ಎಂಬವರ ಮೇಲೆ ಹಾಡಗಲೇ ಹಲ್ಲೆ ನಡೆಸಿ ಪರಾರಿಯಾಗಿದ್ದ.‌ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಈ ನಡುವೆ ಆರೋಪಿ ಅವಿನಾಶ್ ಹೆಬ್ಬಾಳ ಬಳಿಯ ಗುಡ್ಡದಹಳ್ಳಿ ಬಳಿ ಖಚಿತ ಮಾಹಿತಿ ಪಡೆದ ಸಂಜಯನಗರ ಪೊಲೀಸರು ಶನಿವಾರ ಮುಂಜಾನೆ ಆತನನ್ನು ಬಂಧಿಸಲು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅವಿನಾಶ್  ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಬಾಲರಾಜ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಪೊಲೀಸ್​ ಸಿಬ್ಬಂದಿ ಹಾಗೂ ಗಾಯಾಳು ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News