ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತ ಹಿನ್ನೆಲೆ: ಉಭಯ ಜಿಲ್ಲಾಧಿಕಾರಿಗಳಿಂದ ಜಂಟಿ ಸಮೀಕ್ಷೆ
Update: 2021-08-21 19:20 IST
ಮಂಗಳೂರು, ಆ.21: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಭಾರೀ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ದ.ಕ. ಮತ್ತು ಹಾಸನ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶನಿವಾರ ಜಂಟಿ ಸಮೀಕ್ಷೆ ನಡೆಸಿದರು.
ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಪರಿಶೀಲನೆ ನಡೆಸಿದರು.
ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹಾಸನದ ವಿಶೇಷ ಭೂಸ್ವಾಧೀನಾಧಿಕಾರಿ, ಪುತ್ತೂರು ಉಪ ವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.