ದ.ಕ. ಜಿಲ್ಲೆ : ಕೋವಿಡ್‌ಗೆ 4 ಬಲಿ; 320 ಮಂದಿಗೆ ಕೊರೋನ ಪಾಸಿಟಿವ್
Update: 2021-08-21 19:51 IST
ಮಂಗಳೂರು, ಆ. 21: ದ.ಕ. ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ಗೆ 4 ಮಂದಿ ಬಲಿಯಾಗಿದ್ದರೆ, 320 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.3.22 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,531ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 1,07,671ಕ್ಕೇರಿದೆ. ಅಲ್ಲದೆ 428 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 1,02,967ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,173 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 14,50,399 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 13,42,728 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಈವರೆಗೆ ಮಾಸ್ಕ್ ನಿಯಮ ಉಲ್ಲಂಘಿಸಿದ 85,269 ಮಂದಿಯಿಂದ 1,03,75,920 ರೂ. ದಂಡವನ್ನು ವಸೂಲು ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.