ಮಹತ್ವದ ಸರಕಾರಿ ಕಚೇರಿಗಳು ಸುವರ್ಣ ಸೌಧಕ್ಕೆ ಸ್ಥಳಾಂತರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-08-21 16:02 GMT

ಬೆಳಗಾವಿ, ಆ.21: ರಾಜಧಾನಿ ಬೆಂಗಳೂರಿನಲ್ಲಿರುವ ವಿಧಾನಸೌಧದಂತೆ ಬೆಳಗಾವಿಯಲ್ಲಿರುವ ಸುವರ್ಣ ಸೌಧವನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಸರಕಾರ ಬದ್ಧವಾಗಿದ್ದು, ಮಹತ್ವದ ಸರಕಾರಿ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರ ಮಾಡಲು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಸುವರ್ಣ ಸೌಧದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ಆದೇಶ ನೀಡಲಾಗುವುದು. ಅಲ್ಲದೆ, ಈಗಾಗಲೆ ಆದೇಶ ಹೊರಡಿಸಿದ್ದರೂ ಕೆಲವು ಕಚೇರಿಗಳು ಇಲ್ಲಿಗೆ ಸ್ಥಳಾಂತರವಾಗಿಲ್ಲ. ಈ ಸಂಬಂಧ ಮರು ಆದೇಶವನ್ನು ಹೊರಡಿಸಲಾಗುವುದು ಎಂದರು.

ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ನಡೆಸಲಾಗುವುದು. ಜೊತೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಈ ಸಂಬಂಧ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News