9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ

Update: 2021-08-21 16:45 GMT

ಬೆಂಗಳೂರು, ಆ.21: ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಭೌತಿಕ ತರಗತಿಗಳು ಆ.23ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್‍ಕಾರ್ಡ್ ವಿದ್ಯಾರ್ಥಿ ಪಾಸು ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ, ಗುರುತಿನ ಚೀಟಿಯೊಂದಿಗೆ ಆ.23ರಿಂದ ಮುಂದಿನ ಆದೇಶದವರೆಗೂ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲಾ-ಕಾಲೇಜುವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News