×
Ad

ಉಳ್ಳಾಲ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Update: 2021-08-22 10:05 IST

ಮಂಗಳೂರು : ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕ‌ ಹಫೀಝ್‌ ಎಂಬವರ ಮೃತದೇಹ ಇಂದು ಬೆಳಗ್ಗೆ  ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.

ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್  ಶುಕ್ರವಾರದಿಂದ ಕಾಣೆಯಾಗಿದ್ದು, ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು.

ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್‌ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದರು.

ಹಫೀಝ್‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News