×
Ad

ಉಡುಪಿ: ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ

Update: 2021-08-22 11:31 IST

ಉಡುಪಿ, ಆ. 22: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಮುತ್ಸದ್ದಿ ಕಲ್ಯಾಣ್ ಸಿಂಗ್ ಅವರ ನಿಧನದಿಂದ ತೀವ್ರ ವಿಷಾದವಾಗಿದೆ. ಹಿಂದೂ ಸಿದ್ಧಾಂತಕ್ಕೆ ಬದ್ಧರಾಗಿದ್ದ ಅವರು ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥರೊಂದಿಗೂ ವಿಶೇಷ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ಆತ್ಮಕ್ಕೆ ನಮ್ಮ ಆರಾಧ್ಯಮೂರ್ತಿಯೂ ಆಗಿರುವ ಅಯೋಧ್ಯಾಪತಿ ಶ್ರೀ ರಾಮಚಂದ್ರ ದೇವರು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ ಎಂದು ಅಯೋಧ್ಯಾ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News