ಚಾಮರಾಜನಗರ : ಕೆರೆ ಏರಿ ಒಡೆದ ಪರಿಣಾಮ ರಸ್ತೆಯಲ್ಲಿ ಕಾಲುವೆಯಂತೆ ಹರಿದ ನೀರು

Update: 2021-08-22 07:27 GMT

ಚಾಮರಾಜನಗರ: ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ನೀರು ತುಂಬಿಸಿದ ಕೆರೆಯ ಏರಿ ಒಡೆದ ಪರಿಣಾಮ ಅಪಾರ ಪ್ರಮಾಣದ ಕುಡಿಯುವ ನೀರು ರಸ್ತೆ ಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಳಚವಾಡಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಳಚವಾಡಿ ಗ್ರಾಮದಲ್ಲಿ ರವಿವಾರ ಮುಂಜಾನೆ ಕೆರೆ ಏರಿ ಒಡೆದ ಪರಿಣಾಮ ಕೆರೆಯಲ್ಲಿರುವ ನೀರು ರಸ್ತೆಯಲ್ಲಿ ಕಾಲುವೆಯಂತೆ ಹರಿಯುತ್ತಿದ್ದು, ಮತ್ತಷ್ಟು ನೀರು ಅಕ್ಕ ಪಕ್ಕದ ಜಮೀನಿಗೆ ನುಗ್ಗಿದೆ.

ಕೆರೆಯ ಏರಿ ಒಡೆದಿದ್ದರಿಂದ ನೀರು ಯಡಿಯಾಲ ಬೇಗೂರು ರಸ್ತೆಯಲ್ಲಿ ಹರಿಯುತ್ತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳಚವಾಡಿ ಗ್ರಾಮದಕ್ಕೆ ತಹಶೀಲ್ದಾರ್ ರವಿಶಂಕರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರ ಥಾಮಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ಕೆ.ಎಸ್. ಸುಂದರ್ ರಾಜ್,  ಕಾಂಗ್ರೇಸ್ ಮುಖಂಡ ಹೆಚ್.ಎಂ. ಗಣೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News