×
Ad

ಕಲ್ಯಾಣಸಿಂಗ್ ನಿಧನಕ್ಕೆ ಸಿಎಂ ಸೇರಿ ಗಣ್ಯರ ಕಂಬನಿ

Update: 2021-08-22 15:42 IST

ಬೆಂಗಳೂರು, ಆ. 22: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೇಧಾವಿ: ಕಲ್ಯಾಣ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂತಹ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ. 

- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತತ್ವಕ್ಕಾಗಿ ಸಿಎಂ ಹುದ್ದೆ ತ್ಯಾಗ: `ಮಾಜಿ ಸಿಎಂ ಕಲ್ಯಾಣ ಸಿಂಗ್ ಶ್ರೇಷ್ಟ ರಾಷ್ಟ್ರೀಯವಾದಿಯಾಗಿದ್ದರು ಮತ್ತು ನಿಜ ದೇಶಭಕ್ತರಾಗಿದ್ದರು. ಅಯೋಧ್ಯೆಯ ವಿಚಾರದಲ್ಲಿ ಅವರು ತತ್ವ-ಸಿದ್ಧಾಂತಕ್ಕೆ ಕಟ್ಟುಬಿದ್ದು ಮುಖ್ಯಮಂತ್ರಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು. ಅವರು ಅತ್ಯುತ್ತಮ ಆಡಳಿತಗಾರಾಗಿದ್ದರು ಮತ್ತು ಹಿಂದುಳಿದ ವರ್ಗಗಳ ಹರಿಕಾರರಾಗಿದ್ದರು. ತತ್ವಾದರ್ಶಗಳಿಗೆ ಬದ್ಧರಾಗಿದ್ದ ಅವರು ಉತ್ತರ ಪ್ರದೇಶದ ಸವಾರ್ಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರು ಪಾರದರ್ಶಕ ಮತ್ತು ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಮತ್ತು ಸಮಾಜದ ಎಲ್ಲ ವರ್ಗದ, ಎಲ್ಲ ಸ್ತರದ ಜನರ ಯೋಗಕ್ಷೇಮದ ಬಗ್ಗೆ ನೈಜ ಕಾಳಜಿ ಹೊಂದಿದ್ದರು.

- ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

`ಬಿಜೆಪಿಯ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾದ ಕಲ್ಯಾಣ್ ಸಿಂಗ್ ಅವರ ನಿಧನ, ದೇಶಕ್ಕೆ  ಭರಿಸಲಾಗದ ನಷ್ಟ ವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ  ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ. 

- ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News