×
Ad

ಬೆಂಗಳೂರು: ನಾಳೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಉದ್ಘಾಟನೆ

Update: 2021-08-22 21:10 IST

ಬೆಂಗಳೂರು, ಆ. 22: ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಟಾನದ ಉದ್ಘಾಟನಾ ಸಮಾರಂಭ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ ರೂವಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಾಳೆ(ಆ.23) ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹಾಗೂ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧಮೇರ್ಂದ್ರ ಪ್ರಧಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಶದ್ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News