×
Ad

ಶಾಲೆ ಪುನರಾರಂಭ: ವಿದ್ಯಾರ್ಥಿಗಳು, ಪೋಷಕರಿಗೆ ಸಲಹೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-08-22 23:48 IST

ಬೆಂಗಳೂರು:  ನಾಳೆ(ಆ.23)ಯಿಂದ 2021- 22ನೆ ಶೈಕ್ಷಣಿಕ ಸಾಲಿನ 9, 10ನೆ ತರಗತಿ ಹಾಗೂ ಪದವಿ ಪೂರ್ವ ಕಾಲೇಜುಗಳು ಪುನರಾರಂಭಕ್ಕ ಸರಕಾರ ಎಲ್ಲ ಸಿದ್ಧತೆಗಳನ್ನು ನಡೆಸಿದ್ದು,  ಸರಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಿ ಹಾಸ್ಟೆಲ್ ಮತ್ತು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೀಗ ಈ  ಬಗ್ಗೆ ಪೋಷಕರಿಗೆ ಸಲಹೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಲು ಕೋರುತ್ತೇನೆ' ಎಂದು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ. 

'ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡುತ್ತೇನೆ' ಎಂದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News