ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಬಂಧನ

Update: 2021-08-22 18:37 GMT
Photo: FACEBOOK/ SHYAMAPRASAD MUKHERJEE

 ಬಂಕುರಾ, ಆ. 22: ಸುಮಾರು 10 ಕೋಟಿ ರೂಪಾಯಿ ಹಣಕಾಸು ಅವ್ಯವಹಾರದಲ್ಲಿ ಭಾಗಿಯಾದ ಆರೋಪದಲ್ಲಿ ಪಶ್ಚಿಮಬಂಗಾಳ ವಿಧಾನ ಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಪಶ್ಚಿಮಬಂಗಾಳದ ಮಾಜಿ ಸಚಿವ ಶ್ಯಾಮ್ ಪ್ರಸಾದ್ ಮುಖರ್ಜಿ ಅವರನ್ನು ರವಿವಾರ ಬಂಧಿಸಲಾಗದೆ ಎಂದು ಪೊಲೀಸರು ತಿಳಿಸಿದ್ದಾರೆ.

 2020ರಲ್ಲಿ ಸ್ಥಳೀಯ ಆಡಳಿತದ ಅಧ್ಯಕ್ಷರಾಗಿದ್ದ ಸಂದರ್ಭ ಇ-ಟೆಂಡರ್ಗೆ ಸಂಬಂಧಿಸಿದ ಹಣಕಾಸು ಅವ್ಯವಹಾರ ಹಾಗೂ ಇತರ ಆರೋಪಗಳ ಹಿನ್ನೆಲೆಯಲ್ಲಿ ಅವರ ಬಂಧನ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

9.91 ಕೋಟಿ ರೂಪಾಯಿ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿ ಎಸ್ಡಿಪಿಒ ಬಿಷ್ಣುಪುರದಲ್ಲಿ ತನಿಖೆ ನಡೆಸಿದೆ. ವಿಚಾರಣೆ ಸಂದರ್ಭ ಸಮರ್ಪಕ ಉತ್ತರ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಮುಖರ್ಜಿ ಅವರನ್ನು ಬಂಧಿಸಲಾಗಿದೆ ಎಂದು ಬಂಕುರಾದ ಎಸ್.ಪಿ. ಧೃತಿಮನ್ ಸರ್ಕಾರ್ ಹೇಳಿದ್ದಾರೆ.

ಮುಖರ್ಜಿ ಅವರು ವಿಧಾನ ಸಭೆ ಚುನಾವಣೆಗಿಂತ ಮುನ್ನ ಬಿಜೆಪಿಗೆ ಸೇರಿದ್ದಾರೆ. ಆದರೆ, ಅವರು ಪಕ್ಷದಲ್ಲಿ ಸಕ್ರಿಯವಾಗಿಲ್ಲ ಎಂದು ಬಿಜೆಪಿಯ ಬಿಷ್ಣುಪುರ ಜಿಲ್ಲಾಧ್ಯಕ್ಷ ಸುಜಿತ್ ಅಗಸ್ಥಿ ಪ್ರತಿಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News