ಕೊರಟಗೆರೆ: ವಿದ್ಯುತ್ ತಂತಿ ತಗುಲಿ ಮಹಿಳೆ, ನಾಲ್ಕು ಎಮ್ಮೆಗಳು ಸಾವು

Update: 2021-08-23 11:14 GMT

ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿ ಚಿಕ್ಕಸಾಗ್ಗೆರೆ ಗ್ರಾಮದಲ್ಲಿ ಎಮ್ಮೆ ಮೇಯಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮಹಿಳೆ ಮೃತಪಟ್ಟಿದ್ದು, ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಮೂರು ಗಂಟೆ ವೇಳೆಗೆ ನಡೆದಿದೆ. 

 ಮೃತ ಮಹಿಳೆಯನ್ನು ಗ್ರಾಮದ ಗೌರಮ್ಮ(65) ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ ಎಮ್ಮೆ ಮೇಯಿಸಲು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಇಳಿ ಬಿದ್ದಿದ್ದ ವಿದ್ಯುತ್ ತಂತಿ ಮೊದಲು ಎಮ್ಮೆಗೆ ತಾಕಿದ್ದು, ಇದನ್ನು ಬಿಡಿಸಲು ಹೋದ ಗೌರಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಪಕ್ಕದಲ್ಲಿಯೇ ಮೇಯುತ್ತಿದ್ದ ಇತರೆ ಮೂರು ಎಮ್ಮೆಗಳಿಗೂ ವಿದ್ಯುತ್ ಪ್ರವಹಿಸಿ ಅಸುನೀಗಿದೆ.  ಘಟನೆಯ ಕುರಿತು ಬೆಸ್ಕಾಂ ಮತ್ತು ಪೊಲೀಸ್ ಅಧಿಕಾರಿ ಗಳಿಗೆ ಮಾಹಿತಿ ನೀಡಲಾಗಿದೆ ಎಂದು ರೈತ ಸಂಘ ಹಾಗು ಹಸಿರು ಸೇನೆ ಕೊರಟಗೆರೆ ತಾಲೂಕು ಉಪಾಧ್ಯಕ್ಷ ಪುಟ್ಟರಾಜು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News