ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-08-23 12:22 GMT

ಬೆಂಗಳೂರು, ಆ. 23: `ಅಫ್ಘಾನಿಸ್ತಾನದಲ್ಲಿ ಎಷ್ಟು ಮಂದಿ ಕನ್ನಡಿಗರು ಸಿಲುಕಿದ್ದಾರೆಂಬ ನಿಖರ ಮಾಹಿತಿಯಾಗಲೀ, ಕನ್ನಡಿಗರಿಗೆ ಪ್ರಾಣಹಾನಿ ಆಗಿರುವ ಬಗ್ಗೆಯಾಗಲೀ ಸರಕಾರಕ್ಕೆ ಇನ್ನೂ ಯಾವುದೆ ಮಾಹಿತಿ ಸಿಕ್ಕಿಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, `ಭಾರತದ ರಾಯಭಾರಿ ಕಚೇರಿ ಜೊತೆ ಕರ್ನಾಟಕ ಸರಕಾರ ನಿರಂತರ ಸಂಪರ್ಕದಲ್ಲಿದೆ. ಈಗಾಗಲೇ ಅಫ್ಘಾನ್‍ನಲ್ಲಿರುವ ಕನ್ನಡಿಗರ ರಕ್ಷಣೆ ಮತ್ತು ತಾಯ್ನಾಡಿಗೆ ಕರೆ ತರಲು ಸರಕಾರ ಮಾಹಿತಿ ಕಲೆ ಹಾಕುತ್ತಿದೆ. ವಿವಿದೆಡೆ ಸಿಲುಕಿರುವ ಕನ್ನಡಿಗರನ್ನು ಪತ್ತೆ ಹಚ್ಚಿ ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತದೆ' ಎಂದರು.

`ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈಗಾಗಲೇ ಕೆಲವು ಕನ್ನಡಿಗರನ್ನು ಅಫ್ಘಾನ್‍ನಿಂದ ಕರೆತರಲಾಗಿದೆ. ಆ ದೇಶದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಕನ್ನಡಿಗರಿಗೆ ಪ್ರಾಣಹಾನಿ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ' ಎಂದು ತಿಳಿಸಿದರು.

`ಅಫ್ಘನ್‍ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿರುವ ಬಗ್ಗೆ ಮಾಹಿತಿ ಕಲೆ ಹಾಕಲು ಹಾಗೂ ಕನ್ನಡಿಗರ ರಕ್ಷಣೆಗಾಗಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿವಿಧೆಡೆ ಸಿಲುಕಿರುವ ಕನ್ನಡಿಗರನ್ನು ಪತ್ತೆ ಹಚ್ಚಿ ಕರೆ ತರಲಾಗುತ್ತದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News