×
Ad

ಆ.25ರಂದು ಅಂಗನವಾಡಿ ನೌಕರರಿಂದ ವಿಧಾನಸೌಧ ಚಲೋ

Update: 2021-08-23 17:37 IST
ಫೈಲ್ ಚಿತ್ರ

ಬೆಂಗಳೂರು, ಆ.23: ಕೋವಿಡ್ ವಾರಿಯರ್ಸ್‍ಗಳಿಗೆ ಪರಿಹಾರ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.25ರಂದು ರಾಜ್ಯ ಅಂಗನವಾಡಿ ನೌಕರರು ವಿಧಾನಸೌಧ ಚಲೋ ಧರಣಿ ನಡೆಸಲಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಮೂಲಕ ಈ ಧರಣಿ ನಡೆಯಲಿದ್ದು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಂದ ಸಾವಿರಾರು ನೌಕರರು ಈ ಧರಣಿಯಲ್ಲಿ ಭಾಗಿಯಾಗಿದ್ದಾರೆ ಎಂದು  ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದ್ದಾರೆ.

ಕೋವಿಡ್ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸುವಾಗ ಕೋವಿಡ್‍ನಿಂದ ಸಾವಿಗೀಡಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕುಟುಂಬಕ್ಕೆ ತಲಾ 30 ಲಕ್ಷ ಪರಿಹಾರ ನೀಡಬೇಕು. ಮೊಟ್ಟೆ ಖರೀದಿ ಹಗರಣದಲ್ಲಿ ಭಾಗಿಯಾಗಿರುವ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಬೇಕು. ಐಸಿಡಿಎಸ್ ಕೆಲಸ ಹೊರತುಪಡಿಸಿ ಉಳಿದ ಕೆಲಸಗಳನ್ನು ನಿಬರ್ಂಧಿಸಬೇಕು. 2016ರಿಂದ ನಿವೃತ್ತಿಯಾದ ಸುಮಾರು 7166 ಅಂಗನವಾಡಿ ನೌಕರರಿಗೆ ಬಾಕಿ ಇರುವ ಇಡುಗಂಟು ಕೊಡಬೇಕು. 2015ರಿಂದ ಹೊಸದಾಗಿ ನೇಮಕವಾಗಿರುವವರಿಗೆ ಎಲ್‍ಐಸಿ ಆಧಾರಿತ ನಿವೃತ್ತಿ ಸೌಲಭ್ಯ ಕೊಡಬೇಕು ಎಂದು ಆಗ್ರಹಿಸಿದರು

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಐಎಲ್‍ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿಷ್ಠ ವೇತನ ಜಾರಿಮಾಡಬೇಕು. ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು, ಅಲ್ಲಿಯವರೆಗೆ ಕಾರ್ಯಕರ್ತೆಯರಿಗೆ 30 ಸಾವಿರ ಮತ್ತು ಸಹಾಯಕಿಯರಿಗೆ 21 ಸಾವಿರ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಖಾಲಿ ಇರುವ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ಹುದ್ದೆಗಳನ್ನು ಮತ್ತು ಇಲಾಖೆ ಸಿಬ್ಬಂದಿಗಳ ಹುದ್ದೆಗಳನ್ನ ಭರ್ತಿ ಮಾಡಬೇಕು. ಸೇವಾ ಹಿರಿತನ ಮತ್ತು ಮೀಸಲಾತಿ ಆಧಾರದಲ್ಲಿ ಅಂಗನವಾಡಿ ನೌಕರರಿಗೆ ಮುಂಬಡ್ತಿ ಕೊಡಬೇಕು. ಜತೆಗೆ, ಐಸಿಡಿಎಸ್ ಯೋಜನೆಗೆ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯನ್ನು ರಕ್ಷಿಸಬೇಕು ನೌಕರರ ಸಂಘವೂ ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News