ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

Update: 2021-08-23 12:16 GMT

ಬೆಂಗಳೂರು: 'ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಸದಾಶಿವನಗರ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳ ಜತೆ ಸೋಮವಾರ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು. 

ಈ ವೇಳೆ, ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ದೇಶದಲ್ಲಿ ಕೋವಿಡ್ ಜತೆಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಇನ್ನಿಲ್ಲದ ತೊಂದರೆ ಆಗುತ್ತಿದೆ. ಇದೆಲ್ಲವನ್ನು ಮರೆಸಲು ಈ ರೀತಿ ಮಾತನಾಡಿ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಇಂತಹ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ' ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News