ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-08-23 13:07 GMT

ಉಡುಪಿ, ಆ.23: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಇತರೆ ಯೋಜನೆ ಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲೂಕು ವಲಯದಲ್ಲಿ ರೈತರ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡುವುಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿ ಚಟುವಟಿಕೆಗಳಡಿ ಆಯ್ಕೆಯಾದ 10 ಮಂದಿ ರೈತರಿಗೆ ತಲಾ 25,000ರೂ. ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗೆ 5 ಮಂದಿ ರೈತರಿಗೆ ತಲಾ 10,000ರೂ.ವನ್ನು ನೀಡಿ ಗೌರವಿಸಲಾಗುವುದು.

ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ) ಹಾಗೂ ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ರೈತರು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಇದಕ್ಕಾಗಿ ಅರ್ಜಿ ಲ್ಲಿಸಲು ಸೆಪ್ಟೆಂಬರ್ 17 ಕೊನೆಯದಿನ.

ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಅರ್ಜಿ ನಮೂನೆಯನ್ನು ತಮ್ಮ ತಾಲೂಕಿನ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News