ಉಡುಪಿ: ಕೋವಿಡ್‌ಗೆ ಮಹಿಳೆ ಬಲಿ; 137 ಮಂದಿಗೆ ಸೋಂಕು ದೃಢ

Update: 2021-08-23 15:08 GMT
ಸಾಂದರ್ಭಿಕ ಚಿತ್ರ

ಉಡುಪಿ, ಆ.23: ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಕೋವಿಡ್‌ಗೆ ಬಲಿಯಾದರೆ, 137 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು 98 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1,581ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಸೋಮವಾರ ಜಿಲ್ಲೆಯಲ್ಲಿ ಉಡುಪಿ ತಾಲೂಕಿನ 67 ವರ್ಷ ಪ್ರಾಯದ ಮಹಿಳೆಯೊಬ್ಬರು ಸಾಂಕ್ರಾಮಿಕಕ್ಕೆ ಬಲಿಯಾಗಿದ್ದಾರೆ. ಕೋವಿಡ್ ರೋಗಲಕ್ಷಣದೊಂದಿಗೆ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲಿದ್ದ ಇವರನ್ನು ಆ.12ಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಥ್ರೈರಾಯ್ಡ್ ಹಾಗೂ ಯಕೃತ್ ಸಮಸ್ಯೆಯಿಂದಲೂ ಬಳಲಿದ್ದ ಇವರು ರವಿವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 441ಕ್ಕೇರಿದೆ.

ಇಂದು ಕೊರೋನ ಸೋಂಕು ದೃಢಪಟ್ಟ 137 ಮಂದಿಯಲ್ಲಿ 58 ಮಂದಿ ಪುರುಷರು ಹಾಗೂ 79 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 95 ಮಂದಿ ಉಡುಪಿ ತಾಲೂಕು, 24 ಮಂದಿ ಕುಂದಾಪುರ ಹಾಗೂ 18ಮಂದಿ ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದವರಲ್ಲಿ 15 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 122 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರವಿವಾರ 98 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 70,905ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7204 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 72,927ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,99,860 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಇಂದು ಸಹ ಹೊಸದಾಗಿ ಯಾರೂ ಬ್ಲಾಕ್ ಫಂಗಸ್ ಸೋಂಕಿನ ಚಿಕಿತ್ಸೆಗೆ ದಾಖಲಾಗಿಲ್ಲ. ಚಿಕಿತ್ಸೆ ಪಡೆಯುತಿದ್ದ ಒಬ್ಬರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಹೊರಜಿಲ್ಲೆಗಳ ಇಬ್ಬರು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

12,926 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 12,926 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ 7869 ಮಂದಿಗೆ ಮೊದಲ ಡೋಸ್ ಹಾಗೂ 5057 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 6208 ಮಂದಿ ಮೊದಲ ಹಾಗೂ 2661 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 1661 ಮಂದಿಗೆ ಮೊದಲ ಹಾಗೂ 2395 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈವರೆಗೆ ಒಟ್ಟಾರೆಯಾಗಿ ಜಿಲ್ಲೆಯ 6,16,459 ಮಂದಿಗೆ ಮೊದಲ ಡೋಸ್ ಹಾಗೂ 2,31,385 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಈವರೆಗೆ ಒಟ್ಟಾರೆಯಾಗಿ ಜಿಲ್ಲೆಯ 6,16,459 ಮಂದಿಗೆ ಮೊದಲ ಡೋಸ್ ಹಾಗೂ 2,31,385 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News