ಅಂತಾರಾಜ್ಯ ಜಲವಿವಾದ; ದಿಲ್ಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಸಿಎಂ ಬೊಮ್ಮಾಯಿ‌

Update: 2021-08-24 06:52 GMT

ಬೆಂಗಳೂರು, ಆ.24 : ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಹೊಸದಿಲ್ಲಿಯಲ್ಲಿ ಕಾನೂನು ತಜ್ಞರ ಜತೆ  ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿಯಿಂದು ಮಾಧ್ಯಮದವರೊಂದಿಗೆ  ಮಾತನಾಡಿ ಅವರು, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್,  ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.  ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.

ಕರ್ನಾಟಕದ ನೆಲ, ಜಲ, ಭಾಷೆಯ ಹಿತರಕ್ಷಣೆ ಗೆ ಸರ್ವ ಪ್ರಯತ್ನ ಮಾಡಲಾಗುವುದು, ಈ ವಿಷಯದಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ತಿಳಿಸಿದರು.

ಆ.25ರಂದು ಹೊಸದಿಲ್ಲಿಗೆ ತೆರಳಿ 26ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ  ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇರುವ ತಜ್ಞರ ಸಮಿತಿ ಮುಂದುವರಿಯಲಿದೆ. ಕೇಂದ್ರ ವಿಪತ್ತು ನಿರ್ವಹಣಾ ಸಮಿತಿ ಅಕ್ಟೋಬರ್ ನಲ್ಲಿ ರಾಜ್ಯಕ್ಕೆ ಬರಬಹುದು. ಕೋವಿಡ್ ಮೂರನೇ ಅಲೆಯ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News