×
Ad

ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ಆರೋಪ: ಒಕ್ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿಎಂಟಿಸಿ ಸೇವೆಯಿಂದ ವಜಾ

Update: 2021-08-24 17:32 IST

ಬೆಂಗಳೂರು, ಆ.24: ಸಾರಿಗೆ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿದ ಆರೋಪದ ಮೇಲೆ ಒಕ್ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್(ಚಂದ್ರು) ಅವರನ್ನು ಬಿಎಂಟಿಸಿ ಸೇವೆಯಿಂದ ವಜಾಗೊಳಿಸಿ ದಕ್ಷಿಣ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಜಗದೀಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ

ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳ ಕಾಲ ಮುಷ್ಕರ ನಡೆಸಿದ್ದರು. ಬಿಎಂಟಿಸಿ ಘಟಕ 33ರಲ್ಲಿ ಚಾಲಕರಾಗಿದ್ದ ಚಂದ್ರಶೇಖರ್, ಕಳೆದ ಎಪ್ರಿಲ್ ತಿಂಗಳಲ್ಲಿ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗವಹಿಸಿ ಅನಿಧಿಕೃತವಾಗಿ ಕೆಲಸಕ್ಕೆ ಗೈರುಹಾಜರಾಗಿದ್ದರು. 

ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಒಂದು ವರ್ಷದಲ್ಲಿ 300ಕ್ಕೂ ಹೆಚ್ಚು ದಿನ ರಜೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ್ ವಿರುದ್ಧ ತನಿಖೆ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News