ಇಂಧನ ಸಚಿವ ವಿ.ಸುನೀಲ್ ಕುಮಾರ್ ಗೆ ಸ್ವಾಗತ
Update: 2021-08-24 20:15 IST
ಬೆಂಗಳೂರು, ಆ.24: ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಮಂಗಳವಾರ ಬೆಂಗಳೂರಿನ ಆನಂದರಾವ್ ವೃತ್ತದಲ್ಲಿರುವ ಕವಿಮಂನ ಇಂಜಿನಿಯರ್ ಗಳ ಸಂಘದ ಸರ್ ಎಂ.ವಿ. ಸಭಾಂಗಣದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಇಲಾಖೆಗೆ ಸ್ವಾಗತಕೋರುವ ಸಮಾರಂಭವನ್ನು ಆಯೋಜಿಸಿತ್ತು.
ಸಮಾರಂಭದಲ್ಲಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಚಿವರನ್ನು ಸನ್ಮಾನಿಸಿದರು. ಕವಿಪ್ರನಿನಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಈ ಸಮಾರಂಭದಲ್ಲಿ ಹಾಜರಿದ್ದರು.