ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ ನಾಲ್ವರು ಬಲಿ; 273 ಮಂದಿಗೆ ಸೋಂಕು ದೃಢ

Update: 2021-08-24 14:49 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಆ.24: ದ.ಕ. ಜಿಲ್ಲೆಯಲ್ಲಿ ಮಂಗಳವಾರ 273 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. 265 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,08,466 ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಈಗಾಗಲೇ 1,04,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,542 ಮಂದಿ ಸಾವಿಗೀಡಾಗಿದ್ದು, ಪ್ರಸ್ತುತ 2,890 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು 85,674 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಇದುವರೆಗೆ ದಾಖಲಾಗಿದ್ದು, ಒಟ್ಟು 1,04,21,720 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News