×
Ad

ಉಡುಪಿ: ಮಂಗಳವಾರ 128 ಮಂದಿಗೆ ಕೊರೋನ ಪಾಸಿಟಿವ್, ಮಹಿಳೆ ಬಲಿ

Update: 2021-08-24 20:35 IST
ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಇಂದು ಹಿರಿಯ ಮಹಿಳೆಯೊಬ್ಬರು ಕೋವಿಡ್ ಸೋಂಕಿಗೆ ಬಲಿಯಾದರೆ, 132 ಮಂದಿಯಲ್ಲಿ ಸೋಂಕು ಹೊಸದಾಗಿ ದೃಢಪಟ್ಟಿದೆ. ಒಟ್ಟು 117 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1591ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಮಂಗಳವಾರ ಕಾರ್ಕಳ ತಾಲೂಕಿನ 84 ವರ್ಷ ಪ್ರಾಯದ ಮಹಿಳೆಯೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಕೋವಿಡ್ ರೋಗದ ಲಕ್ಷಣದೊಂದಿಗೆ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾಕ್ಕಾಗಿ ಇವರನ್ನು ಆ.19ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸೋಮವಾರ ಮೃತಪಟ್ಟರು. ಅವರು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದಲೂ ನರಳುತ್ತಿದ್ದರು. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 442ಕ್ಕೇರಿದೆ.

ಇಂದು ಕೊರೋನ ಸೋಂಕು ದೃಢಪಟ್ಟ 128 ಮಂದಿಯಲ್ಲಿ 60 ಮಂದಿ ಪುರುಷರು ಹಾಗೂ 68 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 72 ಮಂದಿ ಉಡುಪಿ ತಾಲೂಕು, 22 ಮಂದಿ ಕುಂದಾಪುರ ಹಾಗೂ 33ಮಂದಿ ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದವರಲ್ಲಿ 25 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 108 ಮಂದಿ ುನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 117 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 71,022ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7339 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 73,055ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 9,07,199 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಇಂದು ಹೊಸದಾಗಿ ಯಾರೂ ಬ್ಲಾಕ್ ಫಂಗಸ್ ಸೋಂಕಿನ ಚಿಕಿತ್ಸೆಗೆ ದಾಖಲಾಗಿಲ್ಲ. ಸದ್ಯ ಹೊರಜಿಲ್ಲೆಗಳ ಇಬ್ಬರು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

12,549 ಮಂದಿಗೆ ಲಸಿಕೆ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 12,549 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ 7798 ಮಂದಿಗೆ ಮೊದಲ ಡೋಸ್ ಹಾಗೂ 4751 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 5769 ಮಂದಿ ಮೊದಲ ಹಾಗೂ 2079 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 2029 ಮಂದಿಗೆ ಮೊದಲ ಹಾಗೂ 2627 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈವರೆಗೆ ಒಟ್ಟಾರೆಯಾಗಿ ಜಿಲ್ಲೆಯ 6,24,257 ಮಂದಿಗೆ ಮೊದಲ ಡೋಸ್ ಹಾಗೂ 2,36,136 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೋನ ಲಸಿಕೆ ಲಭ್ಯತೆ ವಿವರ
ಉಡುಪಿ ಜಿಲ್ಲೆಯಲ್ಲಿ ಆ.25ರ ಬುಧವಾರ ಮೊದಲ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲ್ಯವಿದ್ದು, ವಿವರ ಈ ಕೆಳಕಂಡಂತಿದೆ.

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವಕೃಪಾ ಶಾಲಾ ಲಸಿಕಾ ಕೇಂದ್ರದಲ್ಲಿ ಬೆಳಗ್ಗೆ 9:30ರಿಂದ ಅಪರಾಹ್ನ 12:00ರವರೆಗೆ ಕೋವ್ಯಾಕ್ಸಿನ್ ಎರಡನೇ ಡೋಸ್-80, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಸೆ.30ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲ್ಯವಿದೆ. ಸಮಯ ಬೆಳಗ್ಗೆ 9:00ರಿಂದ ಅಪರಾಹ್ನ 1:00ರವರೆಗೆ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News