ಕಾಶ್ಮೀರ: ಮೂವರು ಶಂಕಿತ ಉಗ್ರರ ಹತ್ಯೆ

Update: 2021-08-24 18:09 GMT

ಶ್ರೀನಗರ, ಅ. 23: ಉತ್ತರ ಕಾಶ್ಮೀರದ ಸೋಪೊರೆ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆ ಸಂದರ್ಭ ಮೂವರು ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿರುವ ಎರಡನೇ ಪ್ರಮುಖ ಉಗ್ರ ನಿಗ್ರಹ ಕಾರ್ಯಾಚರಣೆ ಇದಾಗಿದೆ.

ಸೋಪೊರೆ ಗ್ರಾಮದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಸೇನೆ, ಪೊಲೀಸರು ಹಾಗೂ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ಆರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಪೊರೆ ಗ್ರಾಮದಲ್ಲಿ ಉಗ್ರರು ಅವಿತಿದ್ದು, ಪ್ರದೇಶವನ್ನು ಯೋಧರು ಸುತ್ತುವರಿದಾಗ ಉಗ್ರರು ಗುಂಡು ಹಾರಿಸಿದರು. ಯೋಧರು ಪ್ರತಿದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಮೂವರು ಶಂಕಿತ ಉಗ್ರರು ಹತರಾದರು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News