ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್
Update: 2021-08-25 15:58 IST
ಮೈಸೂರು, ಆ.25: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು, ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿ ಮಂಗಳವಾರ ಸಂಜೆ ತನ್ನ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ್ದಳು. ಈ ವೇಳೆ ಅಲ್ಲಿಗೆ ಆಗಮಿಸಿದ ನಾಲ್ವರು ಯುವಕರ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗಂಟೀ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.