ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನಕ್ಕೆ ಅಗತ್ಯ ಕ್ರಮ; ಮುಖ್ಯಮಂತ್ರಿ ಬೊಮ್ಮಾಯಿ
ಹೊಸದಿಲ್ಲಿ, ಆ.25: ಮೈಸೂರಿನಲ್ಲಿ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಹೇಳಿಕೆಯನ್ನು ದಾಖಲಿಸಲಾಗಿದೆ. ಅದರ ಆಧಾರದ ಮೇಲೆ ದೂರು ದಾಖಲಿಸಿ ಆರೋಪಿಗಳ ಬಂಧನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು.
ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯವಾದ ಕೃತ್ಯ. ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ, ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.
ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇನೆ. ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಬಳಿಕ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ಮೇಕೆದಾಟು ಯೋಜನೆ, ಜಲ ಜೀವನ್ ಮಿಷನ್ ಸೇರಿದಂತೆ ಹಲವು ವಿಚಾರಗಳ ಕುರಿತು ವಿಸ್ತøತವಾಗಿ ಚರ್ಚೆ ನಡೆಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.