ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ಬಂಟ್ವಾಳ, ಆ. 25: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು.
ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕ ವಿತರಣೆಗೈದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಪ್ರಗತಿಯ ಸಂಕೇತವಾಗಿದ್ದು, ಸಾಮಾಜಿಕ ಬದಲಾವಣೆಯಿಂದಾಗಿ ಪ್ರಸ್ತುತ ಪ್ರತಿಯೊಬ್ಬರಿಗೂ ವಿದ್ಯಾಭ್ಯಾಸ ಪಡೆಯುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.
ಶಾಲಾ ದತ್ತು ಸ್ವೀಕಾರ ಸಮಿತಿ ಸಂಚಾಲಕ, ಜಿ.ಪಂ. ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ಮಾತನಾಡಿ, ಆದಷ್ಟು ಬೇಗ ಶಾಲೆ ಆರಂಭವಾಗಲಿ ಎಂದು ಆಶಿಸಿದರು. ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ಅಧ್ಯಕ್ಷ ದಿವಾಕರ ಪಂಬದ ಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ದತ್ತು ಸಮಿತಿ ಸದಸ್ಯ ಮಧುಸೂದನ್ ಶೆಣೈ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೋಷನ್ ರೈ, ಗ್ರಾ.ಪಂ.ಸದಸ್ಯ ರವಿರಾಜ್ ಜೈನ್, ಮನೋಜ್ ಕನಪಾಡಿ, ಹಳೆ ವಿದ್ಯಾರ್ಥಿ ಶಶಿಧರ ಬ್ರಹ್ಮರಕೂಟ್ಲು, ವೆಂಕಪ್ಪ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಕಲಾ, ಹಿರಿಯರಾದ ನೋಣಯ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಪ್ಲೋರಿನ್ ರೆಬೆಲ್ಲೊ ಸ್ವಾಗತಿಸಿದರು, ಪ್ರೀತಿ ಪ್ಲೇವಿ ಫೆರ್ನಾಂಡೀಸ್ ವಂದಿಸಿದರು. ಮಂಜುಳಾ ಡಿ. ಕಾರ್ಯಕ್ರಮ ನಿರೂಪಿಸಿದರು.