×
Ad

ಶಾಸಕ ರಾಜೇಶ್ ನಾಯ್ಕ್ ರಿಂದ ಶಿಕ್ಷಣ ಸಚಿವರ ಭೇಟಿ

Update: 2021-08-25 21:37 IST

ಬಂಟ್ವಾಳ, ಆ.25:‌ ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಬುಧವಾರ ಬೆಂಗಳೂರಿನ ವಿಧಾನಸೌಧ ಕಚೇರಿ ಯಲ್ಲಿ ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ನೇತೃತ್ವದ ನಿಯೋಗ ಭೇಟಿ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ - ಕಾಲೇಜುಗಳನ್ನು ತೆರೆಯುವ ಬಗ್ಗೆ ಚರ್ಚಿಸಿತು.

ಹಾಗೆಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಶಾಸಕರು ಮನವಿಯನ್ನು ಸಚಿವರಿಗೆ ಸಲ್ಲಿಸಿದರು.

ಆ.30 ರಂದು ಸಭೆ: ಇದೇ ವೇಳೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು, ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸುವಂತೆ ಒತ್ತಾಯಿಸಿ ಪ್ರತ್ಯೇಕ ಮನವಿ ಯನ್ನು ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸಬೇಕೆನ್ನುವ ಚಿಂತನೆ ಸರಕಾರಕ್ಕೂ ಇದ್ದು, ಈ ಬಗ್ಗೆ ಆ.30ರಂದು ಮುಖ್ಯಮಂತ್ರಿಯ ಉಪಸ್ಥಿತಿಯಲ್ಲಿ ಶಾಸಕರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ದಡ್ಡಲಕಾಡು ಸರಕಾರಿ ಶಾಲೆಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಆದಷ್ಟು ಶೀಘ್ರ ದಡ್ಡಲಕಾಡು ಶಾಲೆಗೆ ಭೇಟಿ ನೀಡುವ ಇಂಗಿತವನ್ನು ವ್ಯಕ್ತಪಡಿಸಿದರು.

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ನರಿಕೊಂಬು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪ್ರಮುಖರಾದ ಸಂತೋಷ್ ರಾಯಿಬೆಟ್ಟು, ಸುರೇಶ್ ಕೋಟ್ಯಾನ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News