ಮಾಜಿ ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ರಾಜೇಶ್ ನಾಯ್ಕ್
Update: 2021-08-25 21:40 IST
ಬಂಟ್ವಾಳ, ಆ.25: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿಯ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲದ ಕೋಶಾಧಿಕಾರಿ ಪ್ರಕಾಶ್ ಅಂಚನ್, ರಾಯಿ ಗ್ರಾ.ಪಂ. ಸದಸ್ಯ ಸಂತೋಷ್ ರಾಯಿಬೆಟ್ಟು, ನರಿಕೊಂಬು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.