×
Ad

ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ

Update: 2021-08-25 22:00 IST
photo: twitter 

ನವದೆಹಲಿ, ಆಗಸ್ಟ್ 25: ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಭಾರತ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.

 ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು ಹಾಗೂ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಗೆ ಅನುಮತಿ ನೀಡಲಾಗಿದ್ದು, ಕರ್ನಾಟಕ ಸರ್ಕಾರ ನಿಗದಿ ಪಡಿಸುವ ದಿನಾಂಕದಿಂದ 90 ದಿನಗಳ ಅವಧಿಗೆ ಈ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸಂತಸ ತಂದಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ರವರಿಗೆ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.”

ಬಸವರಾಜ ಬೊಮ್ಮಾಯಿ - ಮುಖ್ಯಮಂತ್ರಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News