×
Ad

ದ.ಕ. ಜಿಲ್ಲೆ : ಕೋವಿಡ್‌ಗೆ ಆರು ಬಲಿ; 217 ಮಂದಿಗೆ ಕೊರೋನ ಸೋಂಕು

Update: 2021-08-25 22:07 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 217 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

321 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆರು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಶೇ. 2.04 ಪಾಸಿಟಿವಿಟಿ ದರ ದಾಖಲಾಗಿದೆ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 108683 ಕ್ಕೆ ಏರಿಕೆಯಾಗಿದೆ. ಈ ಪೈಕಿ 2780 ಸಕ್ರಿಯ ಪ್ರಕರಣಗಳು. 104355 ಮಂದಿ ಗುಣಮುಖರಾಗಿದ್ದಾರೆ. 1548 ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 85769 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10431420 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News