×
Ad

ಬೌದ್ಧಿಕವಾಗಿ ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ: ನಳಿನ್‌ಕುಮಾರ್ ವ್ಯಂಗ್ಯ

Update: 2021-08-25 22:23 IST

ಮಂಡ್ಯ, ಆ.25: ಕಾಂಗ್ರೆಸ್ ಬಳಿ ಯಾವುದೇ ವಿಷಯಗಳಿಲ್ಲ. ಬೌದ್ಧಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ವ್ಯಗವಾಡಿದ್ದಾರೆ.

ನಗರದಲ್ಲಿ  ಬುಧವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿ ಜವಾಬ್ದಾರಿಯುತ ನೆಲೆ ತೋರಲಿಲ್ಲ ಎಂದು ಟೀಕಿಸಿದರು.

ಚೀನಾ, ಪಾಕಿಸ್ತಾನಕ್ಕೆ ಬೆಂಬಲ ಕೊಡುದನ್ನು ಕಾಂಗ್ರೆಸ್‌ ನವರು ಮಾಡುತ್ತಾರೆ. ಕಾಶ್ಮೀರ ಪ್ರತ್ಯೇಕ ಎಂಬ ಹೇಳಿಕೆಯನ್ನು ಪಂಜಾಬ್ ಕಾಂಗ್ರೆಸ್‌ ನ ಪ್ರಮುಖರು ನೀಡಿದ್ದಾರೆ. ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗಿದೆ. ಹೀಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜಗಳ ಪ್ರಾರಂಭವಾಗಿದೆ. ಮುಂದೆ ಯಾರು ಸಿಎಂ ಎನ್ನುವ ವಿಚಾರದಲ್ಲಿ ಜಗಳವಾಡುತ್ತಾ, ರಾಜ್ಯದ ಪದಾಧಿಕಾರಿಗಳ ಆಯ್ಕೆಯನ್ನೇ ಕಾಂಗ್ರೆಸ್ ಮಾಡಿಲ್ಲ ಎಂದರು.

ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಸಿಕ್ಕಿದ್ದಕ್ಕೆ ಅಭಿನಂದನೆ ತಿಳಿಸುತ್ತೇನೆ. ಹಾಸನ, ಮಂಡ್ಯ, ಮೈಸೂರು ಭಾಗದಲ್ಲಿ ಬಿಜೆಪಿಗೆ ವೇಗ ಸಿಗಬೇಕು ಎಂಬುದಿತ್ತು. ಅದರ ಮೊಲದ ಪ್ರಯತ್ನದಲ್ಲೇ ಮೈಸೂರು ಮೇಯರ್ ಸ್ಥಾನ ಗೆದ್ದಿದ್ದೇವೆ ಎಂದರು.

ಮಂಡ್ಯದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಯಶಸ್ವಿಯಾಗಿ ನಡೆದಿದೆ. ಬಿಜೆಪಿ ಪರವಾದ ವಾತಾವರಣ ಮಂಡ್ಯದಲ್ಲಿದೆ. ಎಲ್ಲ ನಾಯಕರ ಜತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪಕ್ಷದ ಸಂಘಟನೆಗೂ ಒತ್ತು ನೀಡಲಾಗಿದೆ. ಇದರಿಂದ ಮುಂದಿನ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ರಾಜಗುರುಗಳಿಗೆಬೊಮ್ಮಾಯಿ ದೆಹಲಿ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಬೇರೆ ಕಾರಣಗಳಿಗೆ ಸಿಎಂ ದೆಹಲಿಗೆ ಹೋಗಿದ್ದಾರೆ. ಮಾತುಕತೆ ನಡೆಸಿ ಹಿರಿಯ ಮಾರ್ಗದರ್ಶನದಂತೆ ನಡೆಯಲಿದ್ದಾರೆ ಎಂದರು.

ಸರಕಾರದ ವಿರುದ್ಧ ಮತ್ತೆ ಯತ್ನಾಳ್ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಅವರು, ಯತ್ನಾಳ್ ಅವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಪಕ್ಷದ ರಾಷ್ಟ್ರೀಯ ಶಿಸ್ತು ಸಮಿತಿ ಎಲ್ಲವನ್ನು ಗಮನಿಸುತ್ತಿದೆ ಎಂದು ಪ್ರತಿಕ್ರಿಸಿದರು.

ಜಗ್ಗೇಶ್ ಸಹೋದರ ನಟ ಕೋಮಲ್ ಹೆಸರು ಕೇಳಿ ಬಂದ ವಿಚಾರಕ್ಕೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News