ನನ್ನ ಹೇಳಿಕೆ ಹಿಂಪಡೆಯುತ್ತಿದ್ದೇನೆ; ಗೃಹ ಸಚಿವ ಆರಗ ಜ್ಞಾನೇಂದ್ರ

Update: 2021-08-26 14:37 GMT

ಬೆಂಗಳೂರು, ಆ. 26: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ `ನಾನು ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುತ್ತಿದ್ದೇನೆ. ಆತಂಕದಿಂದ ಆ ಮಾತನ್ನು ಹೇಳಿದ್ದೇನೆ. ನಾನು ಆ ಮಾತನ್ನು ವಾಪಸ್ ಪಡೆದುಕೊಳ್ಳುತ್ತೇನೆ, ಅಲ್ಲದೆ ವಿಷಾದ ವ್ಯಕ್ತಪಡಿಸುತ್ತೇನೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಪ್ರತಿಪಕ್ಷ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿಯೂ ಇಂತಹ ಗಂಭೀರವಾದ ಪ್ರಕರಣ ನಡೆದಿದೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟ ಪಡುವುದಿಲ್ಲ. ಏಕೆಂದರೆ ಗೃಹ ಇಲಾಖೆ ನಿಭಾಯಿಸಿದ ಅನೇಕ ಹಿರಿಯರು ಇದ್ದಾರೆ. ಹೀಗಾಗಿ ಅವರು ಸ್ಪಷ್ಟಪಡಿಸಬಹುದು ಎಂದು ನಾನು ಅಂದುಕೊಂಡಿದ್ದೇನೆ' ಎಂದು ಪ್ರತಿಕ್ರಿಯಿಸಿದರು.

`ಅತ್ಯಾಚಾರ ಆಗಿದ್ದು ಮೈಸೂರಿನಲ್ಲಿ. ಆದರೆ, ಕಾಂಗ್ರೆಸ್ ಪಕ್ಷದವರು ನನ್ನನ್ನು ರೇಪ್ ಮಾಡಲು ಪ್ರಯತ್ನ ನಡೆಸಿದ್ದಾರೆ. ಇಂತಹ ಅಮಾನುಷ ಘಟನೆ ನಡೆದ ಸಂದರ್ಭದಲ್ಲಿ ಯಾರೂ ರಾಜಕೀಯ ಮಾಡಬಾರದು. ರಾತ್ರಿ 7:30ರ ಸುಮಾರಿಗೆ ಯುವತಿ, ಯುವಕನ ಜೊತೆ ನಿರ್ಜನ ಪ್ರದೇಶಕ್ಕೆ ತೆರಳಿದ್ದು ಸರಿಯಲ್ಲ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News