ಬೆಳ್ಳೆ: ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Update: 2021-08-26 14:42 GMT

ಶಿರ್ವ, ಆ.26: ನಾಯಕತ್ವ ಎನ್ನುವುದು ಅಧಿಕಾರವಲ್ಲ. ಅದೊಂದು ಅಪೂರ್ವ ಅವಕಾಶ. ಉತ್ತಮ ತರಬೇತಿಯ ಮೂಲಕ ತನ್ನ ಕ್ರಿಯಾಶೀಲ ವ್ಯಕ್ತಿತ್ವವನ್ನು ಜಾಗೃತಗೊಳಿಸಬೇಕು. ಯೋಜಿತ ಕಾರ್ಯಕ್ರಮಗಳನ್ನು ಮಾಡಲು ತರಬೇತಿಗಳು ಅಗತ್ಯ ಎಂದು ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ ಹೇಳಿದ್ದಾರೆ.

ಪಡುಬೆಳ್ಳೆ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ಸಬಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ.ಟ್ರಸ್ಟ್ ಉಡುಪಿ ಜಿಲ್ಲೆ ಇದರ ವತಿಯಿಂದ ಜರುಗಿದ ಶಿರ್ವ ವಲಯ ಮಟ್ಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಶಿರ್ವ ಆರಕ್ಷಕ ಠಾಣೆಯ ಎಎಸ್ಸೈಗಳಾದ ಶ್ರೀಧರ್ ಕೆ.ಜೆ., ಕೃಷ್ಣ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಜಿನರಾಜ್ ಸಿ.ಸಾಲಿಯಾನ್ ಮಾತನಾಡಿದರು.

ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೋಹಿತ್ ಎಚ್. ತರಬೇತಿ ನೀಡಿದರು. ಶಿರ್ವ ವಲಯಾಧ್ಯಕ್ಷ ರಾಘವೇಂದ್ರ ಶೆಟ್ಟಿ, ವಲಯ ಮೇಲ್ವಿಚಾರಕಿ ಪಲ್ಲವಿ ಶೆಟ್ಟಿಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಭಾರತಿ ಸ್ವಾಗತಿಸಿದರು. ಹೇರೂರು ಒಕ್ಕೂಟದ ಸೇವಾ ಪ್ರತಿನಿಧಿ ವಸಂತಿ ಆಚಾರ್ಯ ನಿರೂಪಿಸಿದರು. ದಿನೇಶ ದೇವಾಡಿಗ ಹೇರೂರು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News