×
Ad

ಫರಂಗಿಪೇಟೆ: ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಎಸ್.ಡಿ.ಪಿ.ಐ. ಪ್ರತಿಭಟನೆ

Update: 2021-08-27 11:43 IST

ಫರಂಗಿಪೇಟೆ, ಆ.26: ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಎಸ್.ಡಿ.ಪಿ.ಐ. ಪುದು ಗ್ರಾಮ ಸಮಿತಿಯ ವತಿಯಿಂದ ಫರಂಗಿಪೇಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತಾನಾಡಿದ ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಬಂಟ್ವಾಳ, ಬಿಜೆಪಿ ಹಿಂದಿನ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ಒಳ್ಳೆಯ ದಿನಗಳು ಬರಲಿವೆ ಎಂದು ಅಧಿಕಾರ ದಕ್ಕಿಸಿ ಜನರಿಗೆ ದ್ರೋಹ ಬಗೆದಿದೆ.  ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಪ್ರತಿರೋಧಿಸಲು ವಿರೋಧ ಪಕ್ಷಗಳು ಬೀದಿಯನ್ನು ವೇದಿಕೆ ಮಾಡುವ ಬದಲು ಸದನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಿ ಎಂದರು

ಪ್ರತಿಭಟನಾಕಾರರು ಗ್ಯಾಸ್ ಸಿಲಿಂಡರ್ ಇಟ್ಟು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು

ಎಸ್.ಡಿ.ಪಿ.ಐ. ಪುದು ಗ್ರಾಮ ಸಮಿತಿಯ ಅಧ್ಯಕ್ಷ ಇಕ್ಬಾಲ್ ಅಮೆಮ್ಮಾರ್, ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಕುಂಜತ್ಕಳ, ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್, ಲತೀಫ್ ಮಾರಿಪ್ಪಳ್ಳ ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು

ಶರೀಫ್ ಅಮೆಮ್ಮಾರ್ ಸ್ವಾಗತಿಸಿ, ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News