×
Ad

ಅಫ್ಘಾನಿಸ್ತಾನದಲ್ಲಿ ಹಿಂಸಾಚಾರವನ್ನು ದಯವಿಟ್ಟು ನಿಲ್ಲಿಸಿ: ಕ್ರಿಕೆಟಿಗ ರಶೀದ್ ಖಾನ್ ಮನವಿ

Update: 2021-08-27 12:36 IST
 ರಶೀದ್ ಖಾನ್ (Photo: @rashidkhan_19)

ಕಾಬೂಲ್: ದೇಶದಲ್ಲಿ ಹಿಂಸಾಚಾರವನ್ನು ನಿಲ್ಲಿಸುವಂತೆ ವಿಶ್ವ ಸಮುದಾಯಕ್ಕೆ ಅಫ್ಘಾನಿಸ್ತಾನದ ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಮನವಿ ಮಾಡಿದರು.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಭಯೋತ್ಪಾದಕ ದಾಳಿಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ ರಶೀದ್ "ಕಾಬೂಲ್ ನಲ್ಲಿ ಮತ್ತೊಮ್ಮೆ ರಕ್ತದ ಕೋಡಿ ಹರಿದಿದೆ. ದಯವಿಟ್ಟು ಅಫ್ಘಾನಿಸ್ತಾನವನ್ನು ಕೊಲ್ಲುವುದನ್ನು ನಿಲ್ಲಿಸಿ" ಎಂದು ಬರೆದಿದ್ದಾರೆ.

ಗುರುವಾರದ ಸರಣಿ ಬಾಂಬ್ ಸ್ಫೋಟದಲ್ಲಿ ಮಕ್ಕಳು ಸೇರಿದಂತೆ 73 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಅಮೆರಿಕದ 13 ಯೋಧರು ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News