×
Ad

ಕಡಬ: ಕಳಾರದಲ್ಲಿ ಅಕ್ರಮ ಕಸಾಯಿಖಾನೆ: ಓರ್ವ ಆರೋಪಿಯ ಬಂಧನ

Update: 2021-08-27 13:58 IST

ಕಡಬ, ಆ.27: ಕಡಬ ಸಮೀಪದ ಕಳಾರ ಎಂಬಲ್ಲಿ ಅಕ್ರಮ‌ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿರುವ ಕಡಬ ಪೊಲೀಸರು 40 ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳನ್ನು ವಶಕ್ಕೆ ಪಡೆದಿದ್ದಾರೆ.

ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನು ಕಾರ್ಯಾಚರಣೆ ನಡಸಿದ ಪೊಲೀಸರು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News