ಪ್ಯಾರಾಲಿಂಪಿಕ್ಸ್: ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್ ಸೆಮಿ ಫೈನಲ್ ಗೆ, ಪದಕ ಖಾತ್ರಿ

Update: 2021-08-27 12:48 GMT
Photo: Twitter

ಟೋಕಿಯೊ: ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಭವಿನಾಬೆನ್ ಪಟೇಲ್ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಮಹಿಳೆಯರ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಸೆಮಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಕನಿಷ್ಠ ಕಂಚಿನ ಪದಕವನ್ನು ಖಾತ್ರಿಪಡಿಸಿದರು.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ನಲ್ಲಿ ಪ್ರಾಬಲ್ಯ ಮೆರೆದ ಭವಿನಾ ಸರ್ಬಿಯದ ಬೊರಿಸ್ಲಾವಾ ಪೆರಿಕ್ ವಿರುದ್ಧ 3-0(11-5, 11-6, 11-7) ನೇರ ಗೇಮ್ ಗಳ ಅಂತರದಿಂದ ಜಯ ಸಾಧಿಸಿದರು.

ಜೊಯ್ಸ್ ಡಿ ಒಲಿವೆರಾ ವಿರುದ್ಧ ಸುಲಭ ಜಯ ಸಾಧಿಸಿರುವ ಭವಿನಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News