ಬಿವಿಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2021-08-27 19:03 IST
ಉಡುಪಿ, ಆ. 27: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯೂಯಲ್ ಆರ್ಟ್ಸ್ (ಬಿವಿಎ) ದೃಶ್ಯಕಲೆ ಯಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಪ್ರಥಮ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್‌ಕಲೆ, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನ ಪದವಿಯ ಜೊತೆ ಎರಡು ವರ್ಷಗಳ ಸ್ನಾತಕೋತ್ತರ ಪದವಿಯನ್ನು ಹೊಂದಿದೆ. ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿದ್ದು, ಸೆ.6ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾಪರೀಕ್ಷೆ ಹಾಗೂ ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ-www.mysore.nic.in- ಹಾಗೂ- cavamysore. karnataka.gov.in- ಅಥವಾ ದೂರವಾಣಿ ಸಂಖ್ಯೆ: 0821-2438931ನ್ನು ಸಂಪರ್ಕಿಸುವಂತೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.