ಪ.ಜಾತಿ, ಪಂಗಡ ವಿದ್ಯಾರ್ಥಿಗಳೊಂದಿಗೆ ಸಂವಾದ
ಉಡುಪಿ, ಆ. 27: ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ, ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿವೇತನ, ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, ಪ್ರೋತ್ಸಾಹಧನದ ವಿವಿಧ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಇಲಾಖೆ ಮತ್ತು ವೈದ್ಯಕೀಯ ಇಲಾಖೆ ಮೂಲಕ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಸರಕಾರದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳ ಬಗ್ಗೆ ಪ.ಜಾತಿ ಮತ್ತು ಪ.ಪಂಗಡ ವಿದ್ಯಾರ್ಥಿಗಳೊಂದಿಗೆ ’ಸಂವಾದ’ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಸೆ.14ರಂದು ಸಂಜೆ 4:30ರಿಂದ 7:30ರ ತನಕ ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯನ್ನು ಸೆಪ್ಟೆಂಬರ್ 7ರೊಳಗೆ ಸಲ್ಲಿಸಬಹುದು ಅಥವಾ -http://164.100.133.163/samvada/eSamvadaRegistration.aspx - ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಝೂಮ್ ಲಿಂಕ್ ಮೂಲಕ ವಿವರಗಳನ್ನು ತಿಳಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕಿ ಅನಿತಾ ಮಡ್ಲೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.