×
Ad

ಮನುಷ್ಯ ಪ್ರಾಣಿಗೆ ತಿಂಗಳಿಗೆ ಐದು ಕೆಜಿ ಅಕ್ಕಿ ಸಾಕು, ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಚಿವ ಉಮೇಶ್ ಕತ್ತಿ

Update: 2021-08-27 19:26 IST

ಚಾಮರಾಜನಗರ : ಮನುಷ್ಯ ಪ್ರಾಣಿಗೆ ತಿಂಗಳಿಗೆ ಐದು ಕೆಜಿ ಅಕ್ಕಿ ಸಾಕು ತಾನು ಕೈಗೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಗುರುವಾರ ಬಂಡೀಪುರದಲ್ಲಿ ನೀಡಿದ ಹೇಳಿಕೆಯನ್ನು ಶುಕ್ರವಾರ ಮತ್ತೇ ಸಮರ್ಥಿಸಿಕೊಂಡರು.

ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ, ಕೆ.ಗುಡಿಯ ಜಂಗಲ್ ಲಾಡ್ಜ್ ನಲ್ಲಿ ಮಾಧ್ಯಮಘೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಆಹಾರ ಸಚಿವನಾದ ಬಳಿಕ ಇಲಾಖೆಯಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಒಬ್ಬ ಮನುಷ್ಯ ಪ್ರಾಣಿಗೆ ತಿಂಗಳಿಗೆ ಐದು ಕೆಜಿ ಅಕ್ಕಿ ಸಾಕು ಎನ್ನುವ ನಿರ್ಧಾರಕ್ಕೆ ಬಂದಿದ್ದು, ಮುಂದೆಯೂ ಸಹ ಬಿಪಿಎಲ್ ಪಡಿತರ ಚೀಟಿಯಲ್ಲಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿ ಕೊಡಲಾಗುವುದು. ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಸಚಿವರು ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಕೊಟ್ಟರು ಬಳಿಕ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 7 ಕೆ ಜಿಗೆ ಇಳಿಸಿದರು. ಬಿಜೆಪಿ ಸರ್ಕಾರವು 5 ಕೆಜಿ ಅಕ್ಕಿ ಕೊಡುತ್ತಿದೆ ಇದು ಸಾಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News