1.35ಕೋಟಿ ರೂ.ವೆಚ್ಚದಲ್ಲಿ ಭುಜಂಗ ಪಾರ್ಕ್ ಅಭಿವೃದ್ಧಿ
ಉಡುಪಿ, ಆ.27: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಭುಜಂಗ ಪಾರ್ಕ್‌ನ್ನು ಒಟ್ಟು 1.35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು, ಕಾಮಗಾರಿ ನಡೆಯುತ್ತಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿ ನಗರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಭುಜಂಗ ಪಾರ್ಕ್‌ಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಇಂದು ಪರಿಶೀಲಿಸಿದ ಶಾಸಕರು ಈ ವಿಷಯ ತಿಳಿಸಿದರು.
ಭುಜಂಗ ಪಾರ್ಕ್‌ನ ಅಭಿವೃದ್ಧಿಗೆ ತಮ್ಮ ಶಿಫಾರಸ್ಸಿನ ಮೇರೆಗೆ ಸರಕಾರ ಪ್ರವಾಸೋದ್ಯಮ ಇಲಾಖೆಯ ಮೂಲಕ ಒಂದು ಕೋಟಿ ರೂ. ಹಾಗೂ ನಗರಸಭೆಯಿಂದ 35 ಲಕ್ಷ ರೂ.ಮಂಜೂರಾಗಿದ್ದು, ಇದರ ಕಾಮಗಾರಿ ಪ್ರಾರಂಭಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸ್ಥಳೀಯ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಪೌರಾಯುಕ್ತ ಉದಯ್ ಶೆಟ್ಟಿ, ಅಭಿಯಂತರ ದುರ್ಗಾಪ್ರಸಾದ್, ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರ ಕೃಷ್ಣ ಹೆಬ್ಸೂರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಭಾಕರ್, ಸಹಾಯಕ ಅಭಿಯಂತರ ಹೇಮಂತ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಉಪಸ್ಥಿತರಿದ್ದರು.