ಕರ್ನಾಟಕ ಹೈಕೋರ್ಟ್ ಹಂಗಾಮಿ ಸಿಜೆಯಾಗಿ ಸತೀಶ್ ಚಂದ್ರಶರ್ಮಾ ನೇಮಕ
Update: 2021-08-27 20:38 IST
ಬೆಂಗಳೂರು, ಆ.27: ಕರ್ನಾಟಕ ಹೈಕೋರ್ಟ್ ನಲ್ಲಿ ಅತ್ಯಂತ ಹಿರಿಯ ನ್ಯಾಯಮೂರ್ತಿಯಾದ ಸತೀಶ್ ಚಂದ್ರ ಶರ್ಮಾ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ.
ಸಂವಿಧಾನದ ವಿಧಿ 223ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ರಾಷ್ಟ್ರಪತಿಗಳು ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಆಗಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ಹಂಗಾಮಿ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ಕುರಿತು ಶುಕ್ರವಾರ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಮಧ್ಯ ಪ್ರದೇಶದ ಭೋಪಾಲ್‌ನ ಕೃಷಿ ಕುಟುಂಬದಿಂದ ಬಂದಿರುವ ನ್ಯಾ. ಸತೀಶ ಚಂದ್ರ ಶರ್ಮಾ ಅವರು 2008ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇವರನ್ನು 2021ರ ಜನವರಿ 4ರಂದು ಕರ್ನಾಟಕ ಹೈಕೋರ್ಟ್ ವರ್ಗಾವಣೆ ಮಾಡಲಾಗಿತ್ತು.