ದುಬೈ ಮಾದರಿಯಲ್ಲಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು: ಸಚಿವ ಆನಂದ್ ಸಿಂಗ್
Update: 2021-08-27 21:03 IST
ಬೆಂಗಳೂರು, ಆ. 27: `ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತಪ್ಪಿತಸ್ಥರಿಗೆ ದುಬೈ ಮಾದರಿಯಲ್ಲಿ ಉಗ್ರ ಶಿಕ್ಷೆ ವಿಧಿಸಬೇಕು' ಎಂದು ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಮೈಸೂರಿನ ಚಾಮುಂಡಿಬೆಟ್ಟ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಂತಹ ಸ್ಥಳಗಳಲ್ಲಿ ಭದ್ರತೆ ಕಲ್ಪಿಸುವುದು ಅತ್ಯಗತ್ಯ. ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾದರೆ ಖಾಸಗೀಕರಣ ಮಾಡುತ್ತಿದ್ದಾರೆಂದು ವಿರೋಧ ವ್ಯಕ್ತಪಡಿಸುತ್ತಾರೆ ಎಂದರು.
ಗೃಹ ಇಲಾಖೆ ಸಂಬಂಧ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ದುಬೈ ಮಾದರಿಯಲ್ಲೇ ಕಠಿಣ ಶಿಕ್ಷೆ. ಅದು ಕಟ್, ಇದು ಕಟ್ ಆಗಬೇಕು ಎಂದು ಆನಂದ್ ಸಿಂಗ್ ಇದೇ ಸಂದರ್ಭದಲ್ಲಿ ತಿಳಿಸಿದರು.