ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

Update: 2021-08-28 15:15 GMT

ಹಾವೇರಿ, ಆ. 28: `ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದಿಲ್ಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯ ಎತ್ತರಿಸಲು ಕ್ರಮ ವಹಿಸಲಾಗುವುದು ಎಂದರು.

`ಮರಣ ಪ್ರಮಾಣ ಏರಿಕೆ ಕೇವಲ ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಸೋಂಕು ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ. ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ' ಎಂದು ಅವರು ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News