ಕೋವಿಡ್ ಹರಡುವುದನ್ನು ತಡೆಗಟ್ಟಲು ಮುಂದಿನ ವಾರದಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

Update: 2021-08-28 15:24 GMT

ತಿರುವನಂತಪುರ: ಕೋವಿಡ್ -19 ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿ ಮುಂದಿನ ವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಕೇರಳ ಸರಕಾರವು ಶನಿವಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮುಂದಿನ ವಾರದಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ.

"ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತವು ಶೇಕಡಾ 7 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಸರಕಾರವು ಲಾಕ್‌ಡೌನ್ ಅನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಂದಿನ ವಾರದಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ಇರುತ್ತದೆ " ಎಂದು ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಶನಿವಾರ ರಾಜ್ಯದಲ್ಲಿ ಸತತ ನಾಲ್ಕನೇ ದಿನವೂ ಹೊಸ ಕೋವಿಡ್-19 ಪ್ರಕರಣಗಳು 30,000 ಗಡಿ ದಾಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News